Karnataka 2nd PUC Result 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಯಾಕೆ ಗೊತ್ತೇ? ಅಸಲಿ ಕಾರಣ ಬಹಿರಂಗ!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆಯಾಗಿರುವುದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು, ಪೋಷಕರ ನಿರಾಸೆಗೆ ಕಾರಣವಾಗಿದೆ. ಸದ್ಯ, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಕೆಎಸ್ಇಎಬಿ ಪತ್ರ ಬರೆದಿದೆ. ಅನುಮತಿ ಸಿಕ್ಕ ಕೂಡಲೇ ಸೆಕೆಂಡ್ ಪಿಯುಸಿ ರಿಸಲ್ಟ್ ಘೋಷಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಫಲಿತಾಂಶ ಮುಂದೂಡಿಕೆಗೆ ಕಾರಣ ಏನೆಂಬ ಮಾಹಿತಿ ಇಲ್ಲಿದೆ.

ಚುನಾವಣಾ ನೀತಿ ಸಂಹಿತೆ ಅಡ್ಡಿ
ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 9ರಂದು ಮತದಾನ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಸಾಮಾನ್ಯವಾಗಿ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗುತ್ತದೆ.

ಮೂಲಗಳ ಪ್ರಕಾರ ಮೊದಲು ಏಪ್ರಿಲ್ 7 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡುವ ಮುನ್ನ ಚುನಾವಣಾ ಆಯೋಗದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಫಲಿತಾಂಶ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆಯು ಚುನಾವಣಾ ಆಯೋಗದ ಅನುಮತಿಗಾಗಿ ಕಾಯುತ್ತಿದೆ. ಆಯೋಗದಿಂದ ಗ್ರೀನ್ ಸಿಗ್ನಲ್ ಸಿಗದ ಕಾರಣ ಏಪ್ರಿಲ್ 7 ರಂದು ಪ್ರಕಟವಾಗಬೇಕಿದ್ದ ಫಲಿತಾಂಶ ಹೊರಬಿದ್ದಿಲ್ಲ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಆನ್​ಲೈನ್​ನಲ್ಲಿ ನೋಡುವುದು ಹೇಗೆ?

  • ಸೆಕೆಂಟ್ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ಆನ್​ಲೈನ್​ನಲ್ಲಿ ನೋಡುವುದು ಹೇಗೆಂಬ ಮಾಹಿತಿ ಇಲ್ಲಿದೆ.
  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
    ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಲಾಖೆಯು ನಿಗದಿತ ಗುರಿಯಂತೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆಯೋಗದಿಂದ ಒಪ್ಪಿಗೆ ಸಿಕ್ಕ ಕೂಡಲೇ ಫಲಿತಾಂಶ ಪ್ರಕಟ ಮಾಡಲಿದೆ.

Leave a Reply

Your email address will not be published. Required fields are marked *