Davanagere: ಪ್ರಥಮ ಖಾಸಗಿ ಕೃಷಿ, ತೋಟಗಾರಿಕೆ ಕಾಲೇಜು ಆರಂಭ
ದಾವಣಗೆರೆ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೃಷಿ ಮತ್ತು ತೋಟಗಾರಿಕಾ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ನಗರದ ಬಾಪೂಜಿ ವಿದ್ಯಾಸಂಸ್ಥೆಯಿಂದ ಖಾಸಗಿ ಪ್ರಥಮ ಕೃಷಿ ಮತ್ತು ತೋಟಗಾರಿಕಾ ಕಾಲೇಜು ಆರಂಭ ಮಾಡಲಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ .1ರ ಶನಿವಾರ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಬಾಪೂಜಿ ವಿದ್ಯಾರ್ಥಿ ಸಂಸ್ಥೆಗೆ ಕೃಷಿ ಮತ್ತು ತೋಟಗಾರಿಕಾ ಕಾಲೇಜು ಆರಂಭಿಸಲು ಸರ್ಕಾರ ಅಕ್ಟೋಬರ್ 31ರಂದು ಅನುಮತಿ…

